ಕಡಬ: ನದಿಯಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ..!
ಕಡಬ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15).
ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಅದ್ವೈತ್ ನನ್ನು ರಾತ್ರಿಯಿಡೀ ಮನೆಯವರು ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆವರೆಗೂ ಬಾಲಕ ಪತ್ತೆಯಾಗಿರಲಿಲ್ಲ, ಇಂದು ಬೆಳಗ್ಗೆ ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಬ್ಯಾಗ್ ಪತ್ತೆಯಾಗಿತ್ತು. ಪುತ್ತೂರು ಅಗ್ನಿಶಾಮಕ ದಳದಿಂದ ನದಿಯಲ್ಲಿ ಶೋಧ ಕಾರ್ಯಚರಣೆ ನಡೆಸಿದ್ದು, ಈ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ದೊರೆತಿಲ್ಲ, ಕಡಬ,ಬೆಳ್ಳಾರೆ ಪೋಲೀಸರಿಂದ ಸ್ಥಳದಲ್ಲಿ ಪರಿಶೀಲನೆ