ಕೊಕ್ರಾಡಿ ಶಕ್ತಿ ಕೇಂದ್ರ: ಬಿಜೆಪಿ ಪೂರ್ವಭಾವಿ ಸಭೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು
ಕೊಕ್ರಾಡಿ ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಪೂರ್ವ ಭಾವಿ ಸಭೆಯಲ್ಲಿ ಪಾಲ್ಗೊಂಡರು.
ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಟರಾವಿ ಮಹಾಶಕ್ತಿ ಕೇಂದ್ರ, ಅಧ್ಯಕ್ಷ ಮೋಹನ್ ಅಂಡಿಂಜೆ, ಅಂಡಿಂಜೆ ಗ್ರಾಮಪಂಚಾಯತ್ ಅಧ್ಯಕ್ಷೆ ಜಯಂತಿ ಇದ್ದರು.