ವೇಣೂರು ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ
ವೇಣೂರು, ಜು. 3: ಇಲ್ಲಿಯ ಸ.ಪ.ಪೂ. ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರಗಿತು.
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮಾಧ್ಯಮದ ಪ್ರೊ| ಡಾ. ಸತೀಶ್ ಕುಮಾರ್ ಅಂಡಿಂಜೆ ಅವರು ಸಮಾರಂಭವನ್ನು ಉದ್ಘಾಟಿಸಿ, ಪತ್ರಿಕೋದ್ಯಮ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳಿಗಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಅವರು ಅಧ್ಯಕ್ಷತೆ ವಹಿಸಿದ್ದರು. ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಉಪಾಧ್ಯಕ್ಷೆ ಪುಷ್ಪಾ ಡಿ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರೀಶ್ ಭಟ್, ಉಪನ್ಯಾಸಕಿ ಸೆಲಿನಾ ಪಿ.ಜೆ., ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಸಿನಾನ್, ನಾಯಕಿ ಸಂಚನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯರಾದ ಗಂಗಾಧರ್ ಅವರು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿನಿಯರಾದ ಶಬಾನ ಮತ್ತು ಹಫೀಸಾ ಎಸ್ ನಿರೂಪಿಸಿ, ಉಪನ್ಯಾಸಕಿ ಸೆಲಿನಾ ಪಿ.ಜೆ. ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ಕು| ಸಂಚನಾ ವಂದಿಸಿದರು. ಉಪನ್ಯಾಸಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.