December 24, 2024

ಭಾರೀ ಮಳೆ ಹಿನ್ನೆಲೆ: ದ.ಕ. ಜಿಲ್ಲೆಯ ಹಲವು ಶಾಲೆಗಳಿಗೆ ಇ೦ದು ರಜೆ

0

ಮಂಗಳೂರು, ಜು. 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ದ.ಕ.ದಲ್ಲಿ ತಹಶೀಲ್ದಾರ್‌ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು