December 24, 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುಂಡೂರಿ ಒಕ್ಕೂಟದ ಜುಲೈ ತಿಂಗಳ ತ್ರೈಮಾಸಿಕ ಸಭೆ

0

ಆರ೦ಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುಂಡೂರಿ ಒಕ್ಕೂಟದ ಜುಲೈ ತಿಂಗಳ ತ್ರೈಮಾಸಿಕ ಸಭೆಯು ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಪೂಜಾರಿ ಕುಂಞ್ಞೋಡಿಯವರ ಅಧ್ಯಕ್ಷತೆಯಲ್ಲಿ ಮತ್ತು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನ SSLC ಮತ್ತು PUC ಪರೀಕ್ಷೆಯಲ್ಲಿ ಶೇ. 85 ಕಿಂತ ಅಧಿಕ ಅಂಕ ಗಳಿಸಿದ ಗ್ರಾಮದ 11 ವಿದ್ಯಾರ್ಥಿಗಳನ್ನು ಗುರುತಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅಧ್ಯಕ್ಷರಾದ ರಮೇಶ್ ಪೂಜಾರಿ ಪಡ್ಡಾಯಿಮಜಲ್ ರವರು ಮಾತನಾಡಿ’ ವಿದ್ಯಾರ್ಥಿಗಳ ಸಾಧನೆ ಬಗ್ಗೆ‌ ಮನದಾಳದ ಮಾತಿನೊಂದಿಗೆ ಆರ್ಥಿಕ ಸ್ಥಿತಿಯಿಂದ ಶಿಕ್ಷಣ ಮುಂದುವರಿಸಲು ಸಾಧ್ಯವಾಗದೇ ಇದ್ದ ವಿದ್ಯಾರ್ಥಿಗಳು ತಮ್ಮ ಗಮನಕ್ಕೆ ತಂದಲ್ಲಿ ಕೈಲಾದ ಸಹಾಯ ಮಾಡುವ ಭರವಸೆ ನೀಡಿದರು. ಮತ್ತು ಭಜನಾ ಮಂದಿರದ ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣಕ್ಕೆ ಗ್ರಾಮಸ್ಥರ ಸಹಕಾರ ಕೋರಿದರು. ವೇಣೂರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಶಾಲಿನಿಯವರು ಯೋಜನೆಯ ಬಗ್ಗೆ ಮತ್ತು ಸಂಘಗಳ ಕಾರ್ಯ ನಿರ್ವಹಣೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ಹರೀಶ್ ಬಾಡಾರು ರವರು ಕಾರ್ಯಕ್ರಮ ನಿರೂಪಿಸಿದರು. ಧರ್ಮಶ್ರೀ ಸಂಘದ ಸದಸ್ಯರಾದ ಲೋಕೇಶ್ ದೇವಾಡಿಗರವರು ಸ್ವಾಗತಿಸಿದರು. ಶ್ರೀಮತಿ ಸರೋಜಿನಿ ವಂದಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು