ವೇಣೂರು, ಜು. 5: ಕರಾವಳಿ ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ನಾಳೆ ಅಂದರೆ ಜು. 6ರಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ತಗ್ಗು ಪ್ರದೇಶಗಳು, ಸರೋವರಗಳು, ನದಿ ದಡಗಳು ಮತ್ತು ಕಡಲ ತೀರಗಳಿಗೆ ಮಕ್ಕಳನ್ನು ಬಿಡದಂತೆ ಪೋಷಕರಿಗೆ ಸೂಚಿಸಲಾಗಿದೆ. ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸನ್ನದ್ಧರಾಗಿ ವಿಪತ್ತು ನಿರ್ವಹಣಾ ಚಟುವಟಿಕೆಗಳನ್ನು ತಪ್ಪದೆ ಕೈಗೊಳ್ಳುವಂತೆ ತಿಳಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಚಿಕಿತ್ಸಾ ಕೇಂದ್ರವನ್ನು ಸಿದ್ಧವಾಗಿಡಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.