December 24, 2024

ನಾಳೆಯೂ (ಜು.7) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0

ವೇಣೂರು, ಜು. 6: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ ಅಂದರೆ ಜು. 7ರಂದು ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ತಗ್ಗು ಪ್ರದೇಶಗಳು, ಸರೋವರಗಳು, ನದಿ ದಡಗಳು ಮತ್ತು ಕಡಲ ತೀರಗಳಿಗೆ ಮಕ್ಕಳನ್ನು ಬಿಡದಂತೆ ಪೋಷಕರಿಗೆ ಸೂಚಿಸಲಾಗಿದೆ. ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸನ್ನದ್ಧರಾಗಿ ವಿಪತ್ತು ನಿರ್ವಹಣಾ ಚಟುವಟಿಕೆಗಳನ್ನು ತಪ್ಪದೆ ಕೈಗೊಳ್ಳುವಂತೆ ತಿಳಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಚಿಕಿತ್ಸಾ ಕೇಂದ್ರವನ್ನು ಸಿದ್ಧವಾಗಿಡಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು