ರಾಜ್ಯದಲ್ಲಿ ಮಳೆ ಅಬ್ಬರ ಇಳಿಮುಖ.. ವಾರಾಂತ್ಯಕ್ಕೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಶನಿವಾರ, ರವಿವಾರ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಮಂಗಳೂರು, ಜು. 28: ವಾರಾಂತ್ಯದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸದ್ಯ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯಲಿದ್ದು, ಹೀಗಾಗಿ ಶನಿವಾರ ಮತ್ತು ಭಾನುವಾರ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.