ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ-2024 ಇಂದು ಬಾಹುಬಲಿ ಸಭಾಭವನದಲ್ಲಿ ನಡೆಯಿತು ಪ್ರಥಮ ಪೂರ್ವಭಾವಿ ಸಭೆ
ವೇಣೂರು, ಜು. 29: ಇತಿಹಾಸ ಪ್ರಸಿದ್ಧ ಇಲ್ಲಿಯ ಶ್ರೀ ಭಗವಾನ್ ಬಾಹುಬಲಿ ಸ್ವಾಮಿಗೆ ೨೦೨೪ರ ಫ್ರೆಬ್ರವರಿ ತಿಂಗಳಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಇಂದು ಇಲ್ಲಿಯ ಶ್ರೀ ಬಾಹುಬಲಿ ಸಭಾಭವನದಲ್ಲಿ ವಿವಿಧ ಸಮಿತಿಗಳ ಪೂರ್ವಭಾವಿ ಸಭೆ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಮಹಾಮಸ್ತಕಾಭಿಷೇಕದ ಕಾರ್ಯಾಧ್ಯಕ್ಷರಾದ ಅಳದಂಗಡಿ ಅರಮನೆಯ ಡಾ| ಪದ್ಮಪ್ರಸಾದ ಅಜಿಲರವರು ವಹಿಸಿ, ವಿವಿಧ ಸಮಿತಿಗಳಿಗೆ ಸಂಚಾಲಕರು, ಸಂಯೋಜಕನರನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದರು. ಮಹಾಮಸ್ತಕಾಭಿಷೇಕದ ಪ್ರಯುಕ್ತ ಆರೋಗ್ಯ ಶಿಬಿರಗಳು, ಕೃತಕ ಕೈಕಾಲು ಜೋಡಣೆ ಶಿಬಿರ ಮುಂತಾದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ಹಮ್ಮಿಕೊಳ್ಳಲಿದ್ದೇವೆ. ಅವಿಭಜಿತ ಜಿಲ್ಲೆಗಳ ಶ್ರಾವಕ ಶ್ರಾವಕಿಯವರು ಮಹಾಮಸ್ತಕಾಭಿಷೇಕ ಅತ್ಯಂತ ಯಶಸ್ವಿ ಮತು ವೈಭವದಿಂದ ನಡೆಯಲು ಎಲ್ಲರು ಸಹಕಾರ ನೀಡಬೇಕು ಎಂದರು.
ಸಮಿತಿ ಉಪಾಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಮಾತನಾಡಿ, ಸಮಿತಿ ಮತ್ತು ಸರಕಾರದ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತೇನೆ. ಈಗಾಗಲೇ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಸ್ಟಿಮೇಟ್ ಲಭಿಸಿದ್ದು, ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸುತ್ತೇವೆ ಎಂದರು.
ಸಭೆಯಲ್ಲಿ ವಿವಿಧ ಸಮಿತಿಗಳ ರಚನೆ, ಜವಾಬ್ದಾರಿಗಳ ಬಗ್ಗೆ ಮನವರಿಕೆ ಮಾಡಲಾಯಿತು. ಸಭೆಯಲ್ಲಿ ಮಹಾಮಸ್ತಕಾಭಿಷೇಕ ಸಮಿತಿಯ ಕೋಶಾಧಿಕಾರಿ ಪಿ. ಜಯರಾಜ್ ಕಂಬಳಿ ಉಪಸ್ಥಿತರಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್‌ಕುಮಾರ್ ಇಂದ್ರ ಸ್ವಾಗತಿಸಿ, ಉಪಾಧ್ಯಕ್ಷರಾದ ಯಂ. ವಿಜಯರಾಜ ಅಧಿಕಾರಿ ವಂದಿಸಿದರು. ಉಪನ್ಯಾಸಕ ಮಹಾವೀರ ಜೈನ್ ಮೂಡುಕೋಡಿ ನಿರೂಪಿಸಿದರು.