ಕಾಶಿಪಟ್ಣ ಗ್ರಾಮಪಂಚಾಯತು ನೂತನ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷೆಯಾಗಿ ಶುಭವಿ ಆಯ್ಕೆ
ಕಾಶಿಪಟ್ಣ: ಕಾಶಿಪಟ್ಣ ಗ್ರಾ.ಪಂ.ಗೆ ಎರಡೂವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ ಹಾಗೂ ಉಪಾಧ್ಯಕ್ಷೆಯಾಗಿ ಶುಭವಿ ಆಯ್ಕೆಯಾಗಿದ್ದಾರೆ.
ಗ್ರಾ.ಪಂ. ಉಪಾಧ್ಯಕ್ಷರಾಗಿದ್ದ ಸತೀಶ್ ಕೆ. ಕಾಶಿಪಟ್ಣ ಅವರು ಇತ್ತೀಚೆಗೆ ಬೆಳ್ತಂಗಡಿ ನಗರ ಬ್ಲಾಕ್ ಅಧ್ಯಕ್ಷರಾಗಿ ಕೆಪಿಸಿಸಿಯಿಂದ ನೇಮಕವಾಗಿದ್ದರು. ಪೆರಾಡಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿಯೂ ಇದ್ದಾರೆ. ಶುಭವಿ ವಾರ್ಡ್ ೧ರ ಸದಸ್ಯೆಯಾಗಿದ್ದರು.