December 23, 2024

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

0

 

ಡಿ.4 ರಂದು ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.24 ರಿಂದ ಡಿ.28 ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಈ ಪ್ರಯುಕ್ತ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರದಲ್ಲಿ ನಡೆಯುವ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಡಿ.4 ರಂದು ಪೂರ್ವಾಹ್ನ 11.00 ಕ್ಕೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ, ನಿವೃತ್ತ ತಹಶೀಲ್ದಾರರು ಸೋಮೇ ಗೌಡ ವಹಿಸಲಿದ್ದಾರೆ.

ಚಪ್ಪರ ಮುಹೂರ್ತವನ್ನು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ನೇರವೇರಿಸಲಿದ್ದಾರೆ, ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ, ದೇವರ ಧ್ವನಿ ಸುರುಳಿ ಬಿಡುಗಡೆಯನ್ನು ವೇಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ ನೆರವೇರಿಸಲಿದ್ದಾರೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು