ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಸಪ್ರಶ್ನೆ ಸ್ಪರ್ಧೆ: ವೇಣೂರು ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ವೇಣೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರು ಯುವಜನೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದು, ಇದರಲ್ಲಿ ಸರ್ಕಾರಿ ಪ್ರೌಢಶಾಲೆ ವೇಣೂರು ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೇಯಸ್ ಭಟ್ ಮತ್ತು ಸುಪ್ರಿಯ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಬಹುಮಾನ ಮತ್ತು ಪ್ರಶಸ್ತಿ ಜತೆ ರೂ. 5,000 ನಗದು ಬಹುಮಾನವನ್ನು ಪಡೆದಿರುತ್ತಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.