ಕುಕ್ಕೇಡಿ: ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಸಮಾರಂಭ
ಕುಕ್ಕೇಡಿ : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕುಕ್ಕೇಡಿ-ನಿಟ್ಟಡೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುಕ್ಕೇಡಿ ಎ. ಮತ್ತು ಬಿ. ಹಾಗೂ ನಿಟ್ಟಡೆ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗರ್ಡಾಡಿ ವಲಯ ಇದರ ಸಹಕಾರದಲ್ಲಿ 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭ ಡಿ. 26ರಂದು ಕುಕ್ಕೇಡಿಯ ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂದಿರದ ಸಭಾಂಗಣದಲ್ಲಿ ಜರಗಲಿದೆ.
ಡೆಂಜೋಳಿ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಉದಯಕುಮಾರ್ ಮಂಜಿತ್ತಾಯ ಅವರ ಪೌರೋಹಿತ್ಯದಲ್ಲಿ ಪೂಜಾ ಕಾರ್ಯಗಳು ನೆರವೇರಲಿದೆ.
ಸಭಾ ಕಾರ್ಯಕ್ರಮ ಸಮಾರಂಭದ ಅಧ್ಯಕ್ಷತೆಯನ್ನು ಕುಂಡದಬೆಟ್ಟು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾಗಿರುವ ವರದ ಕುಲಾಲ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಅನಿತಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಕುಕ್ಕೇಡಿ ಮಂಜುಶ್ರೀ ಭಜನಾ ಮಂಡಳಿ ಅಧ್ಯಕ್ಷ ಕೆ. ವೈ. ರವಿ ಭಟ್ ಭಾಗವಹಿಸಲಿದ್ದಾರೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.