ಕುಕ್ಕೇಡಿ: ಸಾಮೂಹಿಕ ಸತ್ಯನಾರಾಯಣ ಪೂಜೆ-ಒಕ್ಕೂಟ ಪದಗ್ರಹಣ ಧರ್ಮಸ್ಥಳ ಯೋಜನೆಯಿಂದ ಸ್ವಾವಲಂಭಿ ಬದುಕು: ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್
ಕುಕ್ಕೇಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಕ್ಕೇಡಿ-ನಿಟ್ಟಡೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕುಕ್ಕೇಡಿ-ನಿಟ್ಟಡೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುಕ್ಕೇಡಿ ಎ ಮತ್ತು ಬಿ ಹಾಗೂ ನಿಟ್ಟಡೆ ಭಜನಾ ಮಂಡಳಿ ಇವರ ಆಶ್ರಯದಲ್ಲಿ ೨೫ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಕಾರ್ಯಕ್ರಮವು ಡಿ. 26ರಂದು ಕುಕ್ಕೇಡಿ ಮಂಜುಶ್ರೀ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಜನರು ಆರ್ಥಿಕವಾಗಿ ಸದೃಢರಾಗಿದ್ದು, ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ. ಜನರ ಒಲಿತಿಗೆ ಕ್ಷೇತ್ರದಿಂದ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದ್ದು, ನಮ್ಮ ಮನೆಯಲ್ಲಿ ನಡೆಯುವ ಕೆಲಸ ಎಂಬ ಭಾವನೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾರವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣವಾಗಿದೆ, ಮಹಿಳೆಯರು ದೃತಿಗೆಡದೆ ಎಲ್ಲಾ ಕ್ಷೇತ್ರಗಳಲ್ಲೂ ಧೈರ್ಯದಿಂದ ಮುಂದುವರೆಯಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲ ಕಾರಣ. ಈ ಒಂದು ಯೋಜನೆಯನ್ನು ನೀಡಿದ ಪರಮಪೂಜ್ಯ ಹೆಗ್ಗಡೆಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷರಾದ ಕೆ.ವೈ. ರವಿ ಭಟ್, ಪ್ರಗತಿಪರ ಕೃಷಿಕರು, ಕುಕ್ಕೇಡಿ ಗ್ರಾ.ಪಂ.ನ ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ ವರದ ಕುಲಾಲ್ ಅವರು ವಹಿಸಿದ್ದರು. ವೇದಿಕೆಯಲ್ಲಿ ರೊನಾಲ್ಡ್ ಮೋನಿಸ್, ಜಗದೀಶ್, ಹಾಗೂ ಕೃಷ್ಣಪ್ರಸಾದ್ ಇವರನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ನಾಲ್ಕು ಒಕ್ಕೂಟದ ನೂತನ ಹಾಗೂ ನಿಕಟ ಪೂರ್ವ ಅಧ್ಯಕ್ಷರುಗಳು ಉಪಸ್ಥಿತರಿದ್ದರು.. ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ವಲಯ ಮೇಲ್ವಿಚಾರಕಿ ಶ್ರೀಮತಿ ಹೇಮಾವತಿ ಸ್ವಾಗತಿಸಿ, ಕುಕ್ಕೇಡಿ ಸೇವಾ ಪ್ರತಿನಿಧಿ ಸುರೇಶ್ ಶೆಟ್ಟಿ ವಂದಿಸಿದರು.