ಜ.1ರಿಂದ ಮೂರು ದಿನ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ಕರ್ನಾಟಕದಲ್ಲಿ ಕೆಲವು ದಿನಗಳ ಕಾಲ ಮರೆಯಾಗಿದ್ದ ಮಳೆರಾಯ ಹೊಸ ವರ್ಷಕ್ಕೆ ಮತ್ತೆ ಆಗಮಿಸುವ ಮುನ್ಸೂಚನೆ ನೀಡಿದೆ.
ಜನವರಿ 1ರಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾರ್ಭಟ ಕಂಡು ಬರಲಿದೆ. ಇದರೊಂದಿಗೆ ಚಳಿಯ ವಾತಾವರಣವು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2024 ಜನವರಿ 1ರಿಂದ ಎರಡು ದಿನ ಕರಾವಳಿ ಭಾಗ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹ ಹಗುರದಿಂದ ಸಾಧಾರಣವಾಗಿ ಮಳೆ ಸುರಿಯಲಿದೆ. ಒಂದೆರೆಡು ಕಡೆಗಳಲ್ಲಿ ಜೋರು ಮಳೆಯ ದರ್ಶನವು ಈ ವೇಳೆ ಆಗಲಿದೆ. ಕರಾವಳಿ ಭಾಗದಲ್ಲಿ ಇತರ ಭಾಗಕ್ಕಿಂತ ಹೆಚ್ಚು ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲೂ ಜನವರಿ ಮೊದಲ ಎರಡು ದಿನ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ಎರಡು ದಿನ ಪೈಕಿ ಜನವರಿ ೧ರಂದು ಚಾಮರಾಜನಗರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗಲಿದೆ. ಜನವರಿ ೨ರಂದು ಮೇಲಿನ ಮೂರು ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ವಿಜಯನಗರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಲವೆಡೆ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಡಿದೆ.