ನೋಂದಣಿ ಮಾಡದೆ ಅಕ್ರಮವಾಗಿ ಸ್ಕ್ಯಾನಿಂಗ್ ಯಂತ್ರದ ಬಳಕೆ ಆರೋಪ ಬೆಳ್ತಂಗಡಿ ಖಾಸಗಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ದಾಳಿ
ಬೆಳ್ತಂಗಡಿ : ನೋಂದಣಿ ಮಾಡದೆ ಅಕ್ರಮವಾಗಿ ಸ್ಕ್ಯಾನಿಂಗ್ ಯಂತ್ರದ ಬಳಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಅರೋಗ್ಯ ಇಲಾಖೆ ಅಧಿಕಾರಿಗಳು ಬೆಳ್ತಂಗಡಿಯಲ್ಲಿನ ಖಾಸಗಿ ಆಸ್ಪತ್ರೆ ಗೆ ದಾಳಿ ನಡೆಸಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ಆಸ್ಪತ್ರೆಯಲ್ಲಿದ್ದ ಸ್ಕ್ಯಾನಿಂಗ್ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ತಪಾಸಣೆ ಸಂದರ್ಭ ನೋಂದಣಿ ಮಾಡದೆ ಬಳಕೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.