ಗರ್ಡಾಡಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ
ಪಡಂಗಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ತನ್ನ ಮನೆಯ ಸಮೀಪ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗರ್ಡಾಡಿಯಲ್ಲಿ ಸಂಭವಿಸಿದೆ.
ಸ್ಥಳೀಯ ನಿವಾಸಿ ದಿವಾಕರ (24) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.
ಕಳೆದ ಕೆಲ ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಜ 2ರಂದು ಮನೆಯಿಂದ ಹೊರ ಹೋದವರು ಮನೆಗೆ ಹಿಂತಿರುಗಿ ಬಾರದಿದ್ದಾಗ ಹುಡುಕಾಟ ನಡೆಸಿದಾಗ ಮನೆಯ ಸಮೀಪದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಮೃತನ ಸಹೋದರ ಜಿತೇಂದ್ರ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.