ರಾಮ ಮಂದಿರ ಉದ್ಘಾಟನೆಗೆ ದಿನಗಣನೆ: ಮಧುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯೆ
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಐತಿಹಾಸಿಕ ಕ್ಷಣಕ್ಕೆ ನಾವೆಲ್ಲಾ ಸಾಕ್ಷಿಯಾಗಲಿದ್ದೇವೆ. ಜನವರಿ 22 ರಂದು ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಇದರಿಂದ ಇಡೀ ಅಯೋಧ್ಯೆವೇ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಜನವರಿ 17ರಂದು ರಾಮ ಲಲ್ಲಾ ವಿಗ್ರಹದ ಮೆರವಣಿಗೆ ನಡೆಯಲಿದೆ. ವಿಗ್ರಹವು ಅಯೋಧ್ಯೆಯನ್ನು ತಲುಪಲಿದೆ. ಮಂಗಲ ಕಲಶಗಳಲ್ಲಿ ಸರಯೂ ನದಿ ನೀರನ್ನು ಹೊತ್ತು ತರುವ ಭಕ್ತರು ರಾಮ ಜನ್ಮ ಭೂಮಿಯ ದೇಗುಲವನ್ನು ತಲುಪಲಿದ್ದಾರೆ.
ಇಂದು ಬೆಳಿಗ್ಗೆ ಸೂರ್ಯ ಸ್ತಂಭಗಳಿಂದ ಅಲಂಕರಿಸಲ್ಪಟ್ಟ ರಸ್ತೆಯನ್ನು ಕಾರ್ಮಿಕರೊಬ್ಬರು ಸ್ವಚ್ಛಗೊಳಿಸುತ್ತಿರುವ ದೃಶ್ಯ.