ಮಂಗಳೂರು ಕುಕ್ಕರ್ ಬಾಂಬು ಸ್ಫೋಟ ಪ್ರಕರಣದ ಸಂತ್ರಸ್ತ ಗಾಯಳುವಿಗೆ ಮುಖ್ಯಮಂತ್ರಿಪರಿಹಾರ ನಿಧಿಯಿಂದ ರೂ. 2 ಲಕ್ಷ ಪರಿಹಾರ ವಿತರಣೆ ಐವನ್ ಡಿಸೋಜ ಶಿಫಾರಸ್ಸಿನಂತೆ ಹಣ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ಮಂಗಳೂರು, ಜನವರಿ 17: ಕುಕ್ಕರ್ ಬಾಂಬ್ ಬ್ಲಾಸ್ಟ್‌ನಿಂದ ಗಾಯಾಳುವಾಗಿದ್ದ ರಿಕ್ಷಾ ಡ್ರೈವರ್ ಪುರುಷೋತ್ತಮ ಪೂಜಾರಿಯವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಖಾತೆಗೆ ಜನವರಿ 1ರಂದು ಸಿಎಂ ಪರಿಹಾರ ನಿಧಿಯಿಂದ ಬಿಡುಗಡೆಯಾದ ಈ ಪರಿಹಾರ ಮೊತ್ತದ ಚೆಕ್ ಅನ್ನು ಪುರುಷೋತ್ತಮ ಪೂಜಾರಿಗೆ ವಿತರಣೆ ಮಾಡಲಾಗಿದೆ.
ಪರಿಹಾರ ಚೆಕ್ ವಿತರಣೆ ಉದ್ದೇಶದಿಂದ ಸಿಎಂ ಪರಿಹಾರ ನಿಧಿಯಿಂದ ಸಿಎಂ ಜಂಟಿ ಕಾರ್ಯದರ್ಶಿ ಪಿ. ಗೋಪಾಲ್ ಆದೇಶ ಹೊರಡಿಸಿದ್ದಾರೆ.
ಪುರುಷೋತ್ತಮ ಪೂಜಾರಿಯವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಐವನ್ ಡಿಸೋಜ ಅವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ನೀಡಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಎರಡು ಲಕ್ಷ ಪರಿಹಾರ ನೀಡುವಂತೆ ಆದೇಶ ಮಾಡಿದ್ದಾರೆ.