ಸವಾಲಿನ ಚಾರ್ಮಾಡಿ ಘಾಟಿ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಅನುದಾನವೆಷ್ಟು ಗೊತ್ತಾ?!
ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ₹343.73 ಕೋಟಿ ಬಿಡುಗಡೆ-ಮಾಹಿತಿ
ಬೆಳ್ತಂಗಡಿ, ಜನವರಿ, 21: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಚಾರ್ಮಾಡಿ ಘಾಟ್ ಅಭಿವುದ್ಧಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಹಣ ಎಷ್ಟು ಕೋಟಿ ಗೊತ್ತಾ?
ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಇಪಿಸಿ ಮಾದರಿಯಲ್ಲಿ 10.8 ಕಿಲೋ ಮೀಟರ್ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತನೆ ಆಗಲಿದೆ. ಚಾರ್ಮಾಡಿ ಘಾಟ್‌ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವಂತಹ ಉಪಕ್ರಮವು ಸವಾಲಿನದ್ದಾಗಿದೆ. ಇದರೊಂದಿದೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆ ಆಗಲಿದೆ” ಎಂದು ತಿಳಿಸಿದ್ದಾರೆ.