December 24, 2024

ರಾಮ ಸೀತಾ ಲಕ್ಷ್ಮಣ ದೇವಾಲಯದ ಲೋಕಾರ್ಪಣೆ ಸಕಲ ಜೀವಗಳು ಸಮಾನತೆ ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ:ಸಿಎಂ ಸಿದ್ದರಾಮಯ್ಯ

0

 

ಭಾರತದಲ್ಲಿ ರಾಮ ಮಂದಿರ ಉದ್ಘಾಟನೆ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ವಿಚಾರ ಇದೀಗ ಜತ್ತಿನಾದ್ಯಂತ ಟ್ರೆಂಡ್ ಆಗಿದೆ. ಅದರಲ್ಲೂ ಹಲವು ಶತಮಾನಗಳ ಬಳಿಕ ಈ ಕಾರ್ಯ ನನಸಾಗಿದೆ. ಹೀಗಿದ್ದಾಗ ಸಿಎಂ ಸಿದ್ದರಾಮಯ್ಯ ಕೂಡ ಶ್ರೀರಾಮ ಮಂದಿರ ಉದ್ಘಾಟನೆ ಮಾಡಿ ಮಾತನಾಡಿದ್ದಾರೆ. ಹಾಗೇ ತಮ್ಮ ದೈವ ಭಕ್ತಿ ಕುರಿತು ಸ್ಪಷ್ಟನೆ ನೀಡಿದ್ದಾರೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು.

ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣ ಬರೆದು ಇಡೀ ಜಗತ್ತಿಗೇ ಕೊಟ್ರು, ದೇವರು ನಮ್ಮ ಆತ್ಮ & ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣ ಅವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನೂ ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ. ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ ಅದು ಪ್ರತಿಯೊಬ್ಬ ಭಕ್ತರ ಸ್ವತ್ತಾಗಿದೆ ಅಂದ್ರು ಸಿಎಂ ಸಿದ್ದರಾಮಯ್ಯ.

ಯಾವುದೇ ಧರ್ಮವು ಜಾತಿ & ಧರ್ಮ ಆಧಾರದ ಮನುಷ್ಯ ದ್ವೇಷವನ್ನ ಹೇಳಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೆ ಬೆಲೆ ಕೊಟ್ಟರು. ಪಿತೃವಾಕ್ಯ ಪಾಲನೆಗೆ ವನ ವಾಸಕ್ಕೆ ಹೋದ್ರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನ ಬೇರ್ಪಡಿಸಲು ಸಾಧ್ಯ ಇಲ್ಲ. ಇವರೆಲ್ಲ ಸಕುಟುಂಬಸ್ಥರು, ಕುವೆಂಪು ಅವರ ಸರ್ವ ಜನಾಂಗದ ಶಾಂತಿ ತೋಟ ಎಂಬ ಆಶಯ ಶ್ರೀರಾಮನ ಆದರ್ಶ & ವ್ಯಕ್ತಿತ್ವದಲ್ಲಿ ಇದೆ. ಮನುಷ್ಯ ಮನುಷ್ಯನನ್ನ ದ್ವೇಷಿಸಬಾರದು ಎಂಬುದೆ ರಾಮಾಯಣ & ಮಹಾಭಾರತ ಸಂದೇಶ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಧರ್ಮದ & ಅಮಾನವೀಯ ಕೆಲಸ ಮಾಡಿ ನಾಟಕೀಯ ಪೂಜೆ ಮಾಡಿದರೆ ಆ ಪೂಜೆಯ ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ. ನಾನು ನಾಸ್ತಿಕನಲ್ಲ – ಆಸ್ತಿಕ ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿ ಇವೆ. ಪ್ರತಿಯೊಬ್ರೂ ಅವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾರೆ ಹಾಗೂ ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿದರಹಳ್ಳಿ ಹೋಬಳಿಯಲ್ಲಿ ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತ ರಾಮ ಸೀತ ಲಕ್ಷ್ಮಣ ದೇವಾಲಯ & 33 ಅಡಿ ಎತ್ತರ ಏಕಶಿಲೆ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದಾರೆ. ಹಾಗೇ ಉದ್ಘಾಟನೆ ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡಿದ್ದ ಸಿಎಂ ಶ್ರೀರಾಮನ ಬಗ್ಗೆ ಮಾತನಾಡಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು