ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಮೂಲಕ 1 ಕೋಟಿ ಮನೆಗಳಿಗೆ ಸೌರ ಫಲಕ ಅಯೋಧ್ಯೆಯಿಂದ ಹಿಂದುರುಗಿ ಮೊದಲ ಮಹತ್ವರ ಯೋಜನೆ ಘೋಷಿಸಿದ ಪ್ರಧಾನಿ ಮೋದಿ!
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯಿಂದ ಹಿಂದಿರುಗಿದ ನಂತರ, ಜನರು ತಮ್ಮ ಮನೆಗಳಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು. “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಯನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ.
ಈ ಯೋಜನೆಯಲ್ಲಿ 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಫಲಕ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. “ಜಗತ್ತಿನ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ” ಎನ್ನುವ ಉದ್ದೇಶದಿಂದ ಈ ಯೋಜನೆ ಆರಂಭಿಸುವುದಾಗಿ ಹೇಳಿದ್ದಾರೆ.
ಈ ನಿರ್ಧಾರವು “ಜಗತ್ತಿನ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ” ಎಂಬ ಅರಿವಿನಿಂದ ಪ್ರೇರಿತವಾಗಿದೆ ಎಂದಿದ್ದಾರೆ.
ಎಕ್ಸ್‌ನಲ್ಲಿ ಘೋಷಣೆ ಮಾಡಿದ ಮೋದಿ
ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಯನ್ನು 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರ ಅಳವಡಿಸುವ ಗುರಿಯೊಂದಿಗೆ ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
“ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ” ಎಂದು ಹೇಳಿದರು.