ಹಳೇ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು, ಜನವರಿ 25: ರಾಜ್ಯದ ಸರಕಾರಿ ನೌಕರರ ‘ಒಪಿಎಸ್’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಮಣಿದಿದೆ.
ಹೌದು, ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ.