ಕುಕ್ಕೇಡಿಯಲ್ಲಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
ಕುಕ್ಕೇಡಿ : 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಾರತೀಯ ಸಂವಿಧಾನದ ಶಿಲ್ಪಿ ಕುಕ್ಕೇಡಿಯಲ್ಲಿರುವ ಡಾ|| ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು.
ಮಾಲಾರ್ಪಣೆಯನ್ನು ರಮೇಶ್ ಪಿಜತ್ತಪಲ್ಕೆ ಮತ್ತು ವಸಂತ ದರ್ಖಾಸು ಅವರ ಮುಖಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಹೋಬಳಿ ಸಂಚಾಲಕರು ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಕುಕ್ಕೇಡಿ, ನಿಟ್ಟಡೆಯ ಎಲ್ಲಾ ಪಧಾದಿಕಾರಿಗಳು ಮತ್ತು ಸಕ್ರೀಯ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಉಪಸ್ಥಿತಿಯನ್ನು ವಿಶೇಷವಾಗಿ ಪರಿಗಣಿಸಲಾಯಿತು ಮತ್ತು ಸಿಹಿತಿಂಡಿಗಳನ್ನು ಹಂಚುವ ಮೂಲಕ ಸಂಭ್ರಮಿಸಲಾಯಿತು.