ಲೋಕಸಭಾ ಚುನಾವಣೆಗೆ ರಾಜ್ಯ ಉಸ್ತುವಾರಿಗಳ ನೇಮಕ ಮಾಡಿದ ಬಿಜೆಪಿ ಹೈಕಮಾಂಡ್ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಕರ್ನಾಟಕದ ಉಸ್ತುವಾರಿ
ನವದೆಹಲಿ, ಜನವರಿ 27: ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕದ ಉಸ್ತುವಾರಿಯನ್ನಾಗಿ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಮತ್ತು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ.