ರಂಜಿತ್ ಶ್ರೀನಿವಾಸನ್ ಹತ್ಯೆ: ಕುಟುಂಬದವರ ಎದುರೇ ಬಿಜೆಪಿ ಮುಖಂಡನನ್ನು ಕೊಂದ 15 ಮಂದಿಗೆ ಗಲ್ಲು ಶಿಕ್ಷೆ
ತಿರುವನತಪುರಂ, ಜನವರಿ 30: ಎರಡು ವರ್ಷಗಳ ಹಿಂದೆ ಅಂದರೆ, 2021 ರ ಡಿಸೆಂಬರ್‌ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ಮುಖಂಡ ರಂಜಿತ್ ಶ್ರೀನಿವಾಸನ್ ಅವರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಮಿಸ್ಟ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಬಂಧ ಹೊಂದಿದ್ದ 15 ವ್ಯಕ್ತಿಗಳಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ.
ಮಾವೇಲಿಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ-1 ಜನವರಿ 30 (ಮಂಗಳವಾರ) ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆ ಮಾಡಿದ 15 ಜನರಿಗೆ ಮರಣದಂಡನೆ ವಿಧಿಸಿದೆ. ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲರಾಗಿದ್ದ ರಂಜಿತ್ ಅವರನ್ನು ಡಿಸೆಂಬರ್ 19, 2021 ರಂದು ಬೆಳಗ್ಗೆ ಅಲಪ್ಪುಳ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ಮನೆಯಲ್ಲಿಯೇ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿದ್ದರು.