ರಾಜ್ಯ ಮಟ್ಟದ ಉದ್ಯೋಗ ಮೇಳ; ದಿನಾಂಕ, ನೋಂದಣಿ ವಿವರ ಇಲ್ಲಿ ತಿಳಿಯಿರಿ
ಬೆಂಗಳೂರು, ಜನವರಿ 31: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಸುವ ಸೂಚನೆಯನ್ನು ನೀಡಿದ್ದರು. ಈಗ ಉದ್ಯೋಗ ಮೇಳಕ್ಕೆ ದಿನಾಂಕ ನಿಗದಿಯಾಗಿದ್ದು, ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ.
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 ಆಯೋಜನೆ ಮಾಡುತ್ತಿದೆ. ‘ಯುವ ಸಮೃದ್ಧಿ ಸಮ್ಮೇಳನ’ ಎಂಬ ಹೆಸರಿನಲ್ಲಿ ಫೆಬ್ರವರಿ 19 ಮತ್ತು 20ರಂದು ಉದ್ಯೋಗ ಮೇಳ ನಡೆಯಲಿದ್ದು, ನೋಂದಣಿ ಪ್ರಾರಂಭವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಯುವನಿಧಿ ಕಾರ್ಯಕ್ರಮದ ಬಳಿಕ ರಾಜ್ಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡುವ ಕುರಿತು ಮಾತನಾಡಿದ್ದರು. ಅಲ್ಲದೇ ಇದಕ್ಕಾಗಿ ಸಚಿವರು ನೇತೃತ್ವದಲ್ಲಿ ಸಮಿತಿಯನ್ನು ಸಹ ರಚನೆ ಮಾಡಲಾಗಿತ್ತು. ಈಗ ಉದ್ಯೋಗ ಮೇಳಕ್ಕೆ ದಿನಾಂಕ ಮತ್ತು ಸ್ಥಳ ನಿಗದಿ ಮಾಡಲಾಗಿದೆ. ಎಲ್ಲಾ ವಿದ್ಯಾರ್ಹತೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.
ನೋಂದಣಿ ಮಾಡಿಕೊಳ್ಳುವುದು ಹೇಗೆ?
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು https://skillconnect.kaushalkar.com/ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ. ಉದ್ಯೋಗದಾತರು ಸಹ ಇದೇ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ.
ಅಭ್ಯರ್ಥಿಗಳು ಮೊದಲ ಹಂತದಲ್ಲಿ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. 2ನೇ ಹಂತದಲ್ಲಿ ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಬೇಕು. 3ನೇ ಹಂತದಲ್ಲಿ ಉದ್ಯೋಗ ಮೇಳದ ಮೇಲೆ ಕ್ಲಿಕ್ ಮಾಡಿ, 4ನೇ ಹಂತದಲ್ಲಿ ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ, 5ನೇ ಹಂತದಲ್ಲಿ ಅರ್ಜಿಯನ್ನು ಅಲ್ಲಿ ನೀಡಿರುವ ವಿವರಗಳನ್ನು ನೀಡಿ ತುಂಬಿ.
ಉದ್ಯೋಗದಾತರು ಸಹ ಇದೇ ವೆಬ್‌ಸೈಟ್‌ಗೆ ಭೇಟಿ ನೀಡಿ. 2ನೇ ಹಂತದಲ್ಲಿ ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ, 3ನೇ ಹಂತದಲ್ಲಿ ಉದ್ಯೋಗಗಳ ಮೇಲೆ ಕ್ಲಿಕ್ ಮಾಡಿ, 4ನೇ ಹಂತದಲ್ಲಿ ಉದ್ಯೋಗದಾತ ನೋಂದಣಿ ಮೇಲೆ ಕ್ಲಿಕ್ ಮಾಡಿ, 5ನೇ ಹಂತದಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಿ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 1800 599 9918 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು.