ನಿವೃತ್ತ ಸಹಾಯಕ ಕೃಷಿ ಅಧಿಕಾರಿ ದಯಾನಂದ ಪೂಜಾರಿ ವಿಧಿವಶ
ಕುಕ್ಕೇಡಿ: ಕುಕ್ಕೇಡಿ ಗ್ರಾಮದ ಪಟ್ಯೋಡಿ ನಿವಾಸಿ, ನಿವೃತ್ತ ಶಿಕ್ಷಕ ದಿ. ಕೊರಗ್ಗಪ್ಪ ಪೂಜಾರಿ ಅವರ ಪುತ್ರ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ದಯಾನಂದ ಪೂಜಾರಿ (75) ಅವರು ಫೆ.19 ರಂದು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರು 32 ವರ್ಷಗಳ ಕಾಲ ಬೆಳ್ತಂಗಡಿ ಹಾಗೂ ಪುತ್ತೂರು ಜಲಾನಯನ ಇಲಾಖೆ ಮತ್ತು ಕೃಷಿ ಇಲಾಖೆಯಲ್ಲಿ ಹಾಗೂ ಮಂಗಳೂರು ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಇಲಾಖೆಯಿಂದ ಲಭಿಸುವ ಯೋಜನೆಗಳನ್ನು ರೈತರಿಗೆ ಸಿಗುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಅವರು ಪತ್ನಿ ಕುಕ್ಕೇಡಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆಯಾಗಿರುವ ಗುಣವತಿ ಡಿ., ಪುತ್ರ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಪ್ರ ಕಾರ್ಯದರ್ಶಿ, ಯುವ ಬಿಲ್ಲವ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ, ವೇಣೂರು -ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.