ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ ಕ್ರಿಡಾಕೂಟಗಳು ಸಂಘಟನೆಗೆ ಉತ್ತಮ ದಾರಿ: ತಾl ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್ ಶಿರ್ಲಾಲ್ ಅಭಿಮತ
ಬಳಂಜ: ಬ್ರಹ್ಮಶ್ರಿ ನಾರಾಯಣಗುರು ಸೇವಾ ಸಮಿತಿ ಬಳಂಜ ಇವರ ಆಶ್ರಯದಲ್ಲಿ ಮಹಿಳಾ ಬಿಲ್ಲವ ವೇದಿಕೆ ಸಹಕಾರದೊಂದಿಗೆ ಯುವ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ
ಬಳಂಜ ಬ್ರಹ್ಮಶ್ರಿ ನಾರಾಯಣಗುರು ಸೇವಾ ಸಮಿತಿಯ ವಾರ್ಷಿಕ ಕ್ರೀಡಾಕೂಟವು ಫೆ. 25 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಆವರಣದಲ್ಲಿ ನಡೆಯಿತು.
ಅಳದಂಗಡಿ ಸಿಎ ಬ್ಯಾಂಕ್ ನ ಉಪಾಧ್ಯಕ್ಷ ಜನಾರ್ಧನ ಪೂಜಾರಿ ಕೊಡಂಗೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.
ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ, ಪತ್ರಕರ್ತ ಮನೋಹರ್ ಬಳಂಜ ಕ್ರೀಡಾಂಗಣ ಉದ್ಘಾಟಿಸಿ ಶುಭಾಶಯ ಕೋರಿದರು.
ತಾಲೂಕು ಯುವ ಬಿಲ್ಲವ ವೇದಿಕೆ ಅದ್ಯಕ್ಷ ಎಂ.ಕೆ. ಪ್ರಸಾದ್ ಶಿರ್ಲಾಲ್ ಮುಖ್ಯ ಅತಿಥಿಯಾಗಿ ಮಾತನಾಡಿ, ಕ್ರಿಡಾಕೂಟಗಳು ಸಂಘಟನೆಗೆ ಉತ್ತಮ ದಾರಿಯಾಗಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಮಾಜದಲ್ಲಿ ಮಾನವೀಯ ಸೇವೆ ಮಾಡಲು ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಅದ್ಯಕ್ಷತೆ ವಹಿಸಿ ಮಾತನಾಡಿ, ಬಳಂಜ ನಾರಾಯಣ ಗುರು ಸಂಘವು ಹಲವಾರು ವರ್ಷಗಳಿಂದ ಸಮಾಜಮುಖಿ ಕಾರ್ಯ ಮಾಡುತ್ತ ಬಂದಿದ್ದು ಎಲ್ಲಾ ಸಮಾಜ ಬಾಂದವರನ್ನು ಒಗ್ಗೂಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದರು.
ವೇದಿಕೆಯಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ, ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಉಪಾಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ಬೆಳ್ತಂಗಡಿ ಯುವವಾಹಿನಿ ಘಟಕ ಅಧ್ಯಕ್ಷ ಸದಾಶಿವ ಪೂಜಾರಿ ಊರ ,pwd ಗುತ್ತಿಗೆದಾರರಾದ ದಿಶಾಂತ್ ಕುಮಾರ್ ಮಿತ್ತಮಾರ್, ಸ್ವರಾಜ್ ಬಂಗೇರ, ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಪುಷ್ಪಾವತಿ ಹೇವ, ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆ ಅದ್ಯಕ್ಷ ದೇವದಾಸ್ ಕೆ. ಸಾಲ್ಯಾನ್, ಬೆಳ್ತಂಗಡಿ ಶ್ರೀ ಗು.ನಾ ಸೇ ಸಂಘದ ನಿರ್ದೇಶಕ ರವೀಂದ್ರ ಬಿ ಅಮಿನ್, ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ,ಸೂಳಬೆಟ್ಟು, ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ಪ್ರಮೋದ್ ಪೂಜಾರಿ, ಪ್ರಗತಿಪರ ಕೃಷಿಕ ಶರತ್ ಪೂಜಾರಿ ಕಾಡಬಾಗಿಲು, ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ, ಬಳಂಜ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ಬಳಂಜ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಶರತ್ ಅಂಚನ್, ಸಂಘದ ಪ್ರದಾನ ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ ಉಪಸ್ಥಿತರಿದ್ದರು.
ಸಂಘದ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಸ್ವಾಗತಿಸಿದರು. ಯುವ ಸಾಹಿತಿ ಚಂದ್ರಹಾಸ್ ಬಳಂಜ ಹಾಗೂ ಮಹಿಳಾ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು .ಮಹಿಳಾ ಬಿಲ್ಲವ ವೇದಿಕೆಯ ಸದಸ್ಯೆ ಮಾಲ ಎಂ.ಕೆ. ಪ್ರಾರ್ಥಿಸಿದರು.
ಸಂಘದ ಪದಾಧಿಕಾರಿಗಳಾದ ಪ್ರವೀಣ್ ಡಿ, ಕೋಟ್ಯಾನ್ ,ಸಂತೋಷ್ ಕುಮಾರ್ ಕಾಪಿನಡ್ಕ, ಯತೀಶ್ ವೈ.ಎಲ್,ದಿನೇಶ್ ಪೂಜಾರಿ ಅಂತರ,ಸದಾನಂದ ಪೂಜಾರಿ ಬೊಂಟ್ರೋಟ್ಟು, ರಂಜಿತ್ ಪೂಜಾರಿ ಮಜಲಡ್ಡ,ದಿನೇಶ್ ಕೋಟ್ಯಾನ್ ಕುದ್ರೋಟ್ಟು,ಪ್ರವೀಣ್ ಪೂಜಾರಿ ಲಾಂತ್ಯಾರು,ಯೋಗೀಶ್ ಆರ್ ಯೈಕುರಿ,ಜಗದೀಶ್ ಪೂಜಾರಿ ತಾರಿಪಡ್ಪು,ರಕ್ಷಿತ್ ಬಗ್ಯೋಟ್ಟು, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಅಶ್ವಿತಾ ಸಂತೋಷ್,ಯುವ ಬಿಲ್ಲವ ವೇದಿಕೆ ಕಾರ್ಯದರ್ಶಿ ಲತೇಶ್ ಪೆರಾಜೆ ಹಾಗೂ ಸಂಘದ ಸದಸ್ಯರು ಸಹಕರಿಸಿದರು.
ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಿತು.