ಕರ್ನಾಟಕದಲ್ಲಿ ಚಿರತೆ ಸಂಖ್ಯೆ ಏರಿಕೆ: ಈ ರಾಜ್ಯ ದೇಶದಲ್ಲೇ ನಂ.1
ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗಿದೆ. ದೇಶಾದ್ಯಂತ ಚಿರತೆಗಳ ಸಂಖ್ಯೆಯ ವರದಿಯನ್ನು ಬಿಡುಗಡೆ ಮಾಡಲಾಗಿದ್ದು ಇದರಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನವಿದೆ.
ಈ ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಪರಿಸರ ಸಚಿವ ಭೂಪೇಮದ್ರ ಯಾದವ್, ‘ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಮ್ಮ ಸಂರಕ್ಷಣಾ ಕಾರ್ಯಾಚರಣೆಯು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ ಎಂಬ ಧೈಯದಲ್ಲಿ ಮುಂದೆ ಸಾಗಲಿದೆ. ವರದಿಯಲ್ಲಿ ತಿಳಿಸಿರುವಂತೆ ಸಂರಕ್ಷಿತ ಪ್ರದೇಶಗಳಾಚೆಗೂ ಸಹ ಚಿರತೆಗಳನ್ನು ನಾವು ರಕ್ಷಣೆ ಮಾಡಬೇಕಾದ ಅಗತ್ಯವಿದೆ’ ಎಂದು ತಿಳಿಸಿದರು.