ಐದನೇ ಟೆಸ್ಟ್‌ಗೂ ಮುನ್ನವೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ ಭಾರತ
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತ 3-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. 5ನೇ ಟೆಸ್ಟ್ ಮಾರ್ಚ್ 7ರಂದು ಧರ್ಮಶಾಲಾದಲ್ಲಿ ಆರಂಭವಾಗಲಿದೆ.
5ನೇ ಟೆಸ್ಟ್ ಪಂದ್ಯಕ್ಕೆ ಮುನ್ನವೇ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC Points Table) ನಲ್ಲಿ ಅಗ್ರಸ್ಥಾನಕ್ಕೇರಿದೆ. ಅಷ್ಟಕ್ಕೂ ಧರ್ಮಶಾಲಾ ಪಂದ್ಯಕ್ಕೆ ಮುನ್ನವೇ ಭಾರತ ಮೊದಲ ಸ್ಥಾನಕ್ಕೇರಲು ಆಸ್ಟ್ರೇಲಿಯಾ ತಂಡ ಕಾರಣವಾಗಿದೆ.
ಈವರೆಗೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ಸೋತ ಬಳಿಕ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಭಾರತ ಮೊದಲ ಸ್ಥಾನಕ್ಕೇರಿದೆ. ನ್ಯೂಜಿಲೆಂಡ್ ವಿರುದ್ಧ ಗೆದ್ದ ಬಳಿಕವೂ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.