ಪಡಂಗಡಿ: ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಸರ್ಕಾರದ ಅರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿದ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು!
ಪಡಂಗಡಿ : ಸರಕಾರದ ಆರೋಗ್ಯ ಇಲಾಖೆಯ ಅಧೀನದಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ವಿಗೆ ಗೇರುಕಟ್ಟೆ ಸಯ್ಯದ್ ಉಮ್ಮರ್ ಅಸ್ಸಖಾಫ್ ತಂಙಳ್ ರವರ ನೇತೃತ್ವದ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿನ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡಂಗಡಿ ಆರೋಗ್ಯ ಕೇಂದ್ರ ಹಾಗೂ ಧರ್ಮಸ್ಥಳ ಆರೋಗ್ಯ ಕೇಂದ್ರ ವ್ಯಾಪ್ತಿಯ ಹಲವಾರು ಪೋಲಿಯೋ ಬೂತ್ ಗಳಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಕರ್ತವ್ಯ ನಿರತರಾಗಿ ಕಾರ್ಯಕ್ರಮದ ಯಶಸ್ಸಿಗೆ ಭಾಗಿಯಾಗಿದ್ದಾರೆ.
ಈ ಹಿಂದೆ ಕೊರೋನ ಕಾಲಘಟ್ಟದಲ್ಲಿ ಸರಕಾರದ ಯೋಜನೆಗಳು ಅನುಷ್ಠಾನಗೊಳಿಸುವಲ್ಲಿ ಸರಕಾರದ ಜೊತೆಗೆ ಕೈಜೋಡಿಸಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪೋಲಿಯೋ ಮನೆ ಭೇಟಿ ಕಾರ್ಯಕ್ರಮದಲ್ಲೂ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ ಎಂಬುದಾಗಿ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ಧಾಳ ತಿಳಿಸಿದ್ದಾರೆ.
ಈ ಕಾರ್ಯಕ್ರಮ ಪಡಂಗಡಿ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಡಾ||. ಸಂಜತ್ ರವರ ನಿರ್ದೇಶನದಲ್ಲಿ ಮಕ್ಕಳು ತೊಡಗಿಸಿಕೊಂಡಿದ್ದು, ಕಾರ್ಯ ನಿರ್ವಹಣೆಯನ್ನು ಕಾಲೇಜು ಉಪ ಪ್ರಾಂಶುಪಾಲರದ ಗೌತಮಿ ಶರಣ್ ನಿರ್ವಹಿಸಿದರು.