December 23, 2024

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೋತ್ಸವ ಸಮಿತಿ ರಚನೆ ಅಧ್ಯಕ್ಷರಾಗಿ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಜಯರಾಮ್ ಶೆಟ್ಟಿ ಆಯ್ಕೆ

0

ವೇಣೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ. 13ರಿಂದ ಎ.22ರವರೆಗೆ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಭಕ್ತರ ಪೂರ್ವಭಾವಿ ಸಭೆಯು ದೇಗುಲದ ಆಡಳಿತಾಧಿಕಾರಿ ಕುಮಾರಸ್ವಾಮಿ ಎನ್. ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು.

ಜಾತ್ರೋತ್ಸವ ಹಾಗೂ ಎ. 25ರಂದು ಜರಗುವ ಶ್ರೀ ಭದ್ರಕಾಳಿ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಸುವ ಸಲುವಾಗಿ ಜಾತ್ರೋತ್ಸವ ಸಮಿತಿಯನ್ನು ರಚಿಸಲಾಯಿತು. ಈ ಸಮಿತಿಯ ಅಧ್ಯಕ್ಷರಾಗಿ  ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಎ. ಜಯರಾಮ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಹಾಗೂ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ತಾಲೂಕು ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಪಿ. ಧರಣೇಂದ್ರ ಕುಮಾರ್, ಜಿ.ಪಂ. ಮಾಜಿ ಸದಸ್ಯರಾದ ಶೇಖರ ಕುಕ್ಕೇಡಿ, ಪ್ರಮುಖರಾದ ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ರಾಜೇಶ್ ಪೂಜಾರಿ ಕೊಪ್ಪದಬಾಕಿಮಾರು, ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಹರೀಶ್ ಕುಮಾರ್ ಪೊಕ್ಕಿ, ಶೇಷ, ನಿತೀಶ್ ಎಚ್., ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಪಿ. ಯನ್. ಪುರುಷೋತ್ತಮ ರಾವ್, ಸೋಮಯ್ಯ ಹನೈನಡೆ ಮುಂತಾದವರು ಪಾಲ್ಗೊಂಡಿದ್ದರು. ದೇವಸ್ಥಾನದ ಸಿಬ್ಬಂದಿ ಕೊರಗಪ್ಪ ಎಂ. ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು