December 23, 2024

ಪ್ರತಾಪ್ ಸಿಂಹಗೆ ಶಾಕ್ ಕೊಟ್ಟ ಬಿಜೆಪಿ; ಮೈಸೂರಿನಿಂದ ಯದುವೀರ್ ಒಡೆಯರ್ ಸ್ಪರ್ಧೆ!

0

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಶಾಕ್ ನೀಡಿದ್ದು, ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಅವರನ್ನು ಕಣಕ್ಕಿಳಿಸಿದೆ.

 

ಎರಡು ಬಾರಿ ಮೈಸೂರು ಸಂಸದರಾಗಿದ್ದ ಪ್ರತಾಪ್ ಸಿಂಹ ಈ ಬಾರಿ ಟಿಕೆಟ್ ಕೈತಪ್ಪುವ ಭೀತಿಯಲ್ಲಿದ್ದರು. ಆದರೂ ತಾನು ಮಾಡಿದ ಅಭಿವೃದ್ಧಿ ಕೆಲಸಗಳು ಕೈಹಿಡಿಯುತ್ತವೆ, ಟಿಕೆಟ್ ಸಿಗುತ್ತದೆ ಎನ್ನುವ ವಿಶ್ವಾಸ ಹೊಂದಿದ್ದರು. ಆದರೂ ಪಕ್ಷ ಅವರನ್ನು ಕಡೆಗಣಿಸಿ ರಾಜವಂಶದ ಯದುವೀರ್ ಅವರಿಗೆ ಟಿಕೆಟ್ ನೀಡಿದೆ.

ಯದುವೀರ್ ಅವರು ಮೈಸೂರಿನಲ್ಲಿ ಚಿರಪರಿಚಿತರಾಗಿದ್ದಾರೆ. ಅವರ ಗೆಲುವು ಸುಲಭವಾಗಲಿದೆ ಎನ್ನುವ ಲೆಕ್ಕಾಚಾರದ ಮೇಲೆ ಟಿಕೆಟ್ ಸಿಕ್ಕಿದೆ ಎನ್ನಲಾಗಿದೆ.

ಟಿಕೆಟ್ ಪಡೆಯಲು ಹರಸಾಹಸ ಮಾಡಿದ್ದರು
ತಮಗೆ ಟಿಕೆಟ್ ಕೈತಪ್ಪುವ ಸೂಚನೇ ಮೊದಲೇ ಸಿಕ್ಕಿದ್ದರಿಂದಲೇ ಪ್ರತಾಪ್ ಸಿಂಹ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸಕ್ರಿಯರಾಗಿದ್ದರು. ಕ್ಷೇತ್ರದಲ್ಲಿ ತಾವು ಮಾಡಿದ ಅಭಿವೃದ್ಧಿ ಕೆಲಸಗಳ ಪಟ್ಟಿಯನ್ನು ಹೈಕಮಾಂಡ್‌ವರೆಗೂ ತಲುಪಿಸಿದ್ದರು. ಕೊನೆ ಕ್ಷಣದಲ್ಲಿ ಅವರಿಗೆ ಟಿಕೆಟ್ ಸಿಗಲ್ಲ ಎನ್ನುವುದು ಖಚಿತವಾದ ಬಳಿಕ ಫೇಸ್‌ಬುಕ್ ಲೈವ್‌ ಬಂದು ಭಾವುಕರಾಗಿ ಮಾತನಾಡಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು