ಧರ್ಮದ ಆಧಾರದ ಮೇಲೆ ದ್ವೇಷವನ್ನು ಹರಡಿದ ಆರೋಪ: ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಚುನಾವಣಾ ಆಯೋಗ
ಬೆಂಗಳೂರು, ಮಾರ್ಚ್ 22: ಸಾಮಾಜಿಕ ಜಾಲತಾಣದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷವನ್ನು ಹರಡಿದ ಆರೋಪದ ಮೇಲೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್ ದಾಖಲಿಸಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣಎಕ್ಸ್ ನಲ್ಲಿ ಸಿಟಿ ರವಿ ರಾಹುಲ್ ಗಾಂಧಿ ಹೇಳಿಕೆ ಉಲ್ಲೇಖಿಸಿ ಬರೆದುಕೊಂಡಿದ್ದ ಪೋಸ್ಟ್ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿ ನೋಡಲ್ ಅಧಿಕಾರಿ ಆರೋಪಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿ ಅವರ ವಿರುದ್ಧ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಕೃತ್ಯಗಳು) ಭಾರತೀಯ ದಂಡ ಸಂಹಿತೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ 126 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಅದು ಆರೋಗ ಹೇಳಿದೆ.