ಕಡಬದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಮನೆ ಮೇಲೆ ಬಿದ್ದ ಮರ
ಮಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಕೂಡ ಮಳೆ ಶುರುವಾಗಿದ್ದು, ಶನಿವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಮನೆಗಳಿಗೆ ಹಾನಿಯಾಗಿದೆ.
ಬಿರುಗಾಳಿ ಮಳೆಯಿಂದಾಗಿ ಕುಟ್ರುಪಾಡಿಯಲ್ಲಿ ಮನೆಯೊಂದರ ಮೇಲೆ ಮರ ಮುರಿದು ಬಿದ್ದಿದ್ದು ಮನೆಯ ಮೇಲ್ಛಾವಣಿಗೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.
ಕುಟ್ರುಪಾಡಿಯ ಬಾಬು ಮತ್ತು ಲಕ್ಷ್ಮೀ ದಂಪತಿಗಳಿಗೆ ಸೇರಿದ ಮನೆ ಮೇಲೆ ಮರ ಬಿದ್ದಿದೆ. ದಂಪತಿಗಳು ಅಪಾಯದಿಂದ ಪಾರಾಗಿದ್ದು, ಶೌಚಾಲಯ, ನೀರಿನ ಟ್ಯಾಂಕ್ ಸಂಪೂರ್ಣ ನಾಶವಾಗಿದೆ. ಪಕ್ಕದಲ್ಲಿರುವ ಒಂದೆರೆಡು ಮನೆಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.