December 24, 2024

ಎಪಿಎಲ್‌, ಬಿಪಿಎಲ್‌ ಕಾರ್ಡ್‌ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು?

0

ಬೆಂಗಳೂರು, ಮಾರ್ಚ್‌, 27: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಗಾಗ ಗ್ರಾಹಕರಿಗೆ ಅಪ್ಡೇಟ್‌ ಮಾಹಿತಿಯನ್ನು ಒದಗಿಸುತ್ತಲೇ ಇರುತ್ತದೆ. ಹಾಗೆಯೇ ಇದೀಗ ಮತ್ತೊಂದು ಮುಖ್ಯವಾದ ಮಾಹಿತಿಯೊಂದನ್ನು ನೀಡಿದೆ. ಹಾಗಾದರೆ ಆ ಮಾಹಿತಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಪಡಿತರ ಚೀಟಿ ಒಂದು ಪ್ರಮುಖ ದಾಖಲೆಯಾಗಿದ್ದು, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಕಡ್ಡಾಯ ದಾಖಲೆ ಆಗಿದೆ. ಅಷ್ಟೇ ಅಲ್ಲದೆ, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಚಾಲಕರ ಪರವಾನಗಿ, ಪಾನ್ ಕಾರ್ಡ್‌ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಕೆ ಮಾಡಲಾಗುತ್ತದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕರ್ನಾಟಕದಲ್ಲಿ ಪಡಿತರ ಚೀಟಿ ವಿತರಣೆ ಮಾಡುತ್ತದೆ. ಆದ್ದರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ ಆಗಿದೆ. ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಇದೀಗ ಅಗತ್ಯ ಇರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬಹುದು ಹಾಗೂ ಯಾವೆಲ್ಲ ದಾಖಲೆಗಳು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಅರ್ಜಿ ಸಲ್ಲಿಕೆಗೆ ಏನೆಲ್ಲ ದಾಖಲೆಗಳು ಬೇಕು?

ವೋಟರ್ ಐಡಿ, ಆಧಾರ್ ಕಾರ್ಡ್, ವಯಸ್ಸಿನ ಪ್ರಮಾಣ ಪತ್ರ, ಡ್ರೈವಿಂಗ್ ಲೈಸೆನ್ಸ್, ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ತೆಗೆದುಕೊಂಡು ಬರಬೇಕಾಗುತ್ತದೆ.

ಅರ್ಜಿ ಸಲ್ಲಿಕೆಗೆ ಇರಬೇಕಾದ ಅರ್ಹತೆಗಳೇನು?
* ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
* ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಸಬಹುದು.
* ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು.
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧಾರವಾಗಲಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು