December 23, 2024

ಮತದಾನದಂದು ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

0

 

ಬೆಂಗಳೂರು, ಮಾರ್ಚ್ 30: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಾಗಾಗಿ ಲೋಕಸಭಾ ಚುನಾವಣೆ ನಡೆಯುವ ಎರಡೂ ದಿನವೂ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದೆ.

“ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ 26.04.2024ರ ಶುಕ್ರವಾರದಂದು ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತ ಹಾಗೂ ಶೋರಾಪುರ-36 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದಿನಾಂಕ 07.05.2024ರ ಮಂಗಳವಾರದಂದು ನಡೆಸುತ್ತಿದೆ”.

ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಈ ಮೂಲಕ ಆದೇಶಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು