ಇಂದು ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ರಸ್ತೆ ಬದಿಗಳಲ್ಲಿ ಪತ್ತೆಯಾದ ನಾಯಿಗಳ ಮೃತದೇಹ! ನರಳಾಡಿ ಸಾವನ್ನಪ್ಪಿದ 10ಕ್ಕೂ ಅಧಿಕ ಸಾಕು ಮತ್ತು ಬೀದಿನಾಯಿಗಳು! ಕಾರಣ ಏನು ಗೊತ್ತಾ?
ಬೆಳ್ತಂಗಡಿ : ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ರಸ್ತೆ ಬದಿಗಳಲ್ಲೇ ಹೊರಲಾಡಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದೋ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಇದನ್ನು ತಿಂದಿರುವ ನಾಯಿಗಳು ಅಲ್ಲಲ್ಲಿ ಸತ್ತು ಬಿದ್ದಿವೆ.
ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.
ಸಾವನ್ನಪ್ಪಿದ ನಾಯಿಗಳನ್ನು ಪಂಚಾಯಿತಿ ವತಿಯಿಂದ ದಫನಕಾರ್ಯ ಮಾಡಲಾಯಿತು.