‘ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ’ ಕುಮಾರಸ್ವಾಮಿಯ ವಿವಾದಿತ ಹೇಳಿಕೆಗೆ ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು, ಏಪ್ರಿಲ್ 14: ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದು, ಹೆಣ್ಣುಮಕ್ಕಳ ಬಗ್ಗೆ ಕುಮಾರಸ್ವಾಮಿಯವರ ಮನಸ್ಥಿತಿ ಏನು ಎಂದು ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿರುವ ಮಾಡಿ ಅವರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು ದಾರಿತಪ್ಪಿದ್ದಾರೆ ಎಂದರೇನು? ಅವರ ಹೇಳಿಕೆಯಿಂದ ಹೆಣ್ಣುಮಕ್ಕಳ ಬಗ್ಗೆ ಅವರಿಗಿರುವ ಭಾವನೆ ಏನು ಎಂದು ಅರ್ಥವಾಗುತ್ತದೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು ಈ ರೀತಿ ಮಾತನಾಡಿದರೆ ಜನ ಸಹಿಸುತ್ತಾರೆಯೇ ಎಂದರು.