ಹನೂರು: ಇಂಡಿಗನತ್ತದಲ್ಲಿ ಮರು ಮತದಾನ: ಚುನಾವಣಾ ಆಯೋಗ ಘೋಷಣೆ
ಚಾಮರಾಜನಗರ, ಏಪ್ರಿಲ್, 27: ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದ್ದು, ಇನ್ನು ಈ ವೇಳೆ ಚಾಮರಾಜನಗರ ಕ್ಷೇತ್ರಕ್ಕೆ ಒಳಪಡುವ ಇಂಡಿಗನತ್ತ ಗ್ರಾಮದಲ್ಲಿ ಜನರು ಮತಗಟ್ಟೆಯನ್ನು ಧ್ವಂಸ ಮಾಡಿದ ಘಟನೆ ನಡೆದಿತ್ತು. ಈ ಸಂಬಂಧ ಚುನಾವಣಾ ಆಯೋಗ ಮಹತ್ವದ ನಿರ್ಧಾರಕ್ಕೆ ಬಂದಿದೆ.
ಶುಕ್ರವಾರ (ಏಪ್ರಿಲ್ 27) ಮತದಾನ ಬಹಿಷ್ಕಾರ ನಡೆಸಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮತಗಟ್ಟೆ ಧ್ವಂಸ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮರು ಚುನಾವಣೆ ಮಾಡುವುದಾಗಿ ಘೋಷಣೆ ಮಾಡಿದೆ. ಏಪ್ರಿಲ್ 29ರ ಸೋಮವಾರದಂದು ಬೆಳಗ್ಗೆ 7ರಿಂದ ಸಂಜೆವರೆಗೆ 146ರ ಮತಗಟ್ಟೆಯಲ್ಲಿ ಮರು ಚುನಾವಣೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.