December 24, 2024

ಹಾಸನ ಪೆನ್ ಡ್ರೈವ್ ಪ್ರಕರಣ: “CID ತನಿಖೆಗೆ ಒಪ್ಪಿಸಿ ಮಹಿಳೆಯರಿಗೆ ರಕ್ಷಣೆ ಕೊಡಿ” ಎಎಪಿ ಮಹಿಳಾ ಘಟಕ ಅಗ್ರಹ

0

 

ಬೆಂಗಳೂರು, ಏಪ್ರಿಲ್ 27: ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್, ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಬೇಕು. ವಿಡಿಯೊ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಸಿ ವಂಚಕನನ್ನು ಬಂಧಿಸಬೇಕು ಎಂದು ಆಮ್ಮ ಆದ್ಮಿ ಪಕ್ಷದ ಮಹಿಳಾ ಘಟಕ ಆಗ್ರಹಿಸಿದೆ.

ಹಾಸನದ ಪ್ರಭಾವಿ ರಾಜಕಾರಣಿ ಕುಟುಂಬದ ಸಂಸದರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿರುವುಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಾ ಸ್ವಾಮಿ ಮಾತನಾಡಿದರು.

ಕಾನೂನು ಬದ್ಧ ಕ್ರಮ ಕೈಗೊಳ್ಳಬೇಕು
ಹಾಸನದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆತ ಎಷ್ಟೇ ಪ್ರಭಾವಿಯಾದರೂ ಕಾನೂನು ಬದ್ಧ ಕ್ರಮಕೈಗೊಳ್ಳಬೇಕು. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು. ವಿಡಿಯೋಗಳನ್ನು ಹಂಚಿಕೆ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ವಿಡಿಯೊಗಳು ಲಭ್ಯವಾದರೆ ದುರಂತ
ಎರಡು ಸಾವಿರಕ್ಕೂ ಹೆಚ್ಚು ಖಾಸಗಿ ವಿಡಿಯೋಗಳು ಹರಿದಾಡುತ್ತಿವೆ ಎನ್ನಲಾಗುತ್ತಿದೆ. ಅಷ್ಟೂ ಮಂದಿ ಸಂತ್ರಸ್ತೆಯರ ಪರಿಸ್ಥಿತಿ ಏನಾಗಬೇಕು? ಅವರ ಕುಟುಂಬ ಸದಸ್ಯರಿಗೆ ಖಾಸಗಿ ವಿಡಿಯೊಗಳು ಲಭ್ಯವಾದರೆ ಏನೇನು ದುರಂತಗಳಾಗುತ್ತವೆ? ಮುಂದಾಗಬಹುದಾದ ದುಷ್ಪರಿಣಾಮಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದರು.

ಇಂತಹ ವಿಡಿಯೊಗಳ ಹಂಚಿಕೆಗೆ ತಡೆಯೊಡ್ಡುವ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ? ಹೆಣ್ಣುಕ್ಕಳ ಬದುಕು ಬೀದಿಗೆ ಬಿದ್ದರೂ ಬೀಳಲಿ, ನಮಗೆ ರಾಜಕೀಯ ಲಾಭವಾದರೆ ಸಾಕು ಎಂಬ ಧೋರಣೆಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆಯೇ? ಎಂದು ಕೇಳಿದರು.

ಅಧಿಕಾರದ ಪ್ರಭಾವದಿಂದ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ದೊಡ್ಡ ಅಪರಾಧವೋ, ವಿಡಿಯೊಗಳನ್ನು ಹಂಚಿಕೆ ಮಾಡುತ್ತಿರುವುದೂ ಅಷ್ಟೇ ದೊಡ್ಡ ಅಪರಾಧವಾಗಿದೆ. ಇವರೆಲ್ಲರೂ ಮಹಿಳೆಯರ ಪಾಲಿನ ರಾಕ್ಷಸರಾಗಿದ್ದಾರೆ. ಮಹಿಳೆಯರು ಎಚ್ಚೆತ್ತುಕೊಳ್ಳಬೇಕು, ಯಾವುದೇ ಪ್ರಭಾವಕ್ಕೆ ಒಳಗಾಗಿ ಇಂತಹ ಸಂಕಷ್ಟದ ಪರಿಸ್ಥಿತಿಗೆ ಸಿಕ್ಕಿಹಾಕಿಕೊಳ್ಳಬಾರದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು