ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಲಿದ್ದು, ಏಪ್ರಿಲ್ 28 ರ ಭಾನುವಾರ ಮತ್ತು ಸೋಮವಾರದ ಎರಡು ದಿನಗಳಲ್ಲಿ ಐದು ಬ್ಯಾಕ್ ಟು ಬ್ಯಾಕ್ ಸಾರ್ವಜನಿಕ ಸಭೆಗಳನ್ನು ನಡೆಸಿ ಮತಯಾಚಿಸಲಿದ್ದಾರೆ. ರಾಜ್ಯದಲ್ಲಿ ತನ್ನ ಸ್ಥಾನಗಳನ್ನು ಬಿಟ್ಟುಕೊಡಬಾರದೆಂಬ ಹಠದಲ್ಲಿರುವ ಬಿಜೆಪಿ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.
ಬಿಜೆಪಿಯ ರಾಜ್ಯ ಘಟಕ ಹಂಚಿಕೊಂಡ ಮಾಹಿತಿ ಪ್ರಕಾರ ಪ್ರಧಾನಿ ಮೋದಿ ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಉತ್ತರ ಕರ್ನಾಟಕ ಪ್ರದೇಶದಲ್ಲಿ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಏಪ್ರಿಲ್ 29, ಸೋಮವಾರದಂದು ಪ್ರಧಾನಿ ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ರಾತ್ರಿ ಕುಂದಾನಗರಿ ಬೆಳಗಾವಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮೋದಿಯವರನ್ನು ಶೆಟ್ಟರ್ ಮತ್ತಿತರ ಗಣ್ಯರು ಸ್ವಾಗತಿಸಿದ್ದಾರೆ.
ವೇಳಾಪಟ್ಟಿ: 1. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕರ್ನಾಟಕ ರಾಜ್ಯ ಸಂಯೋಜಕ ವಿ ಸುನೀಲ್ ಕುಮಾರ್ ಅವರ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸುತ್ತಾರೆ ಮತ್ತು ಬೆಳಗ್ಗೆ 10 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
2. ನಂತರ ಪ್ರಧಾನಿ ಮೋದಿ ಅವರು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಲಿದ್ದಾರೆ.