ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ ಅವಕಾಶ: ಅರ್ಜಿ ಸಲ್ಲಿಕೆಯ ವಿವರ ಇಲ್ಲಿ ತಿಳಿಯಿರಿ
ಬೆಂಗಳೂರು, ಏಪ್ರಿಲ್ 28: ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಯಲ್ಲಿ (Income Tax Department) ಭಾರೀ ಉದ್ಯೋಗ ಅವಕಾಶ ಕಲ್ಪಿಸಿದೆ. ತನ್ನಲ್ಲಿ ಖಾಲಿ ಇರುವ ಅನೇಕ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆದಾಯ ತೆರಿಗೆ ಇಲಾಖೆ ಬಂಪರ್ ಉದ್ಯೋಗಾವಕಾಶ ಇದ್ದು, ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಇಲಾಖೆಯಲ್ಲಿ ಒಟ್ಟು ಅನೇಕ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆ ಖಾಲಿ ಇವೆ. ಅರ್ಹರು ಮುಂದಿನ ತಿಂಗಳು ಮೇ 17ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಆದಾಯ ತೆರಿಗೆ ಇಲಾಖೆ
ಉದ್ಯೋಗ ಹೆಸರು: ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್
ಮಾಸಿಕ ವೇತನ: ನಿಗದಿ ಪಡಿಸಿಲ್ಲ
ಪೋಸ್ಟಿಂಗ್: ರಾಜಸ್ಥಾನ, ಭಾರತ
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಮೇ 7
ಅರ್ಜಿ ಸಲ್ಲಿಕೆ ವಿಧಾನ: ಆಫ್‌ಲೈನ್
ಅರ್ಹ ಅಭ್ಯರ್ಥಿಗಳು ಅಧಿಸೂಚನೆ ನೋಡಿಕೊಂಡು ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ನಿಯಮಾನುಸಾರ ನೀಡಲಾಗುವುದು. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಆಯ್ಕೆ ಮಾಡಿ ವೇತನ ನಿಗದಿ ಮಾಡಲಾಗುತ್ತದೆ.
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಅಲ್ಲಿ ಆಯ್ಕೆಯಾಗುವವರಿಗೆ ನಂತರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆಗುವವರಿಗೆ ರಾಜಸ್ಥಾನ ರಾಜ್ಯದ ಜೋಧ್ಪುರನಲ್ಲಿ ಪೋಸ್ಟಿಂಗ್ ನೀಡಲಾಗುವುದು.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳು ಸಮೇತ ಭರ್ತಿ ಮಾಡಿದ ಅರ್ಜಿಯನ್ನು ಇಲ್ಲಿ ತಿಳಿಸಲಾದ ವಿಳಾಸ, ‘ಆದಾಯ ತೆರಿಗೆಯ ಮುಖ್ಯ ಆಯುಕ್ತರ ಕಚೇರಿ, 4ನೇ ಮಹಡಿ, ಆಯಕರ್ ಭವನ, ಸಬ್ ಸಿಟಿ ಸೆಂಟರ್, ಸವಿನಾ
ಉದಯ್ಪುರ- 313002’ ಇಲ್ಲಿಗೆ ಮೇ 17 ರೊಳಗೆ ತಲುಪುವಂತೆ ಕಳಹಿಸಬೇಕು.
ನೆನಪಿಡಬೇಕಾದ ದಿನಗಳು
ಅರ್ಜಿ ಸಲ್ಲಿಕೆ ಆರಂಭ: 2024 ಏಪ್ರಿಲ್ 18
ಅರ್ಜಿ ಸಲ್ಲಿಸಲು ಕೊನೆಯ ದಿನ: 2024 ಮೇ 17.