ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ, ಮಾಜಿ ಪ್ರಧಾನಿ ದೇವೇಗೌಡರಿಂದ ಆದೇಶ!
ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು, ಅಂತಾ ಆರೋಪ ಮಾಡಿದ್ದ ಸಾವಿರಾರು ಅಶ್ಲೀಲ ವಿಡಿಯೋ ವೈರಲ್ ಆಗಿದ್ದವು. ಈ ಹಿನ್ನೆಲೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೀಗ, ಸ್ವತಃ ತಮ್ಮ ಮೊಮ್ಮಗನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಆದೇಶಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದು, ಹಾಸನದಲ್ಲಿ ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್ಡ್ರೈವ್ ಹಾದಿ ಬೀದಿಯಲ್ಲಿ ಸಿಕ್ಕಿದ್ದವು. ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಆಗಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೂ ಮುಜುಗರ ಉಂಟಾಗಿತ್ತು. ಅಲ್ಲದೆ, ಸ್ವತಃ ಜೆಡಿಎಸ್ ಶಾಸಕರೇ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನ ಜೆಡಿಎಸ್ ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ಬಂಡಾಯ ಎದ್ದಿದ್ದರು. ಈ ವಿಚಾರ ಜೆಡಿಎಸ್ ಪಕ್ಷದ ವರಿಷ್ಠರಿಗೆ ಭಯ ಮೂಡಿಸಿತ್ತು.