December 23, 2024

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಬಿಗ್ ಟ್ವಿಸ್ಟ್: ಅಜ್ಞಾನ ಸ್ಥಳದಲ್ಲಿ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಮಾಜಿ ಕಾರು ಚಾಲಕ

0

ಬೆಂಗಳೂರು, ಏಪ್ರಿಲ್‌ 30: ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಸದ್ಯ ತಲೆಮರೆಸಿಕೊಂಡಿದ್ದು, ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಅಜ್ಞಾತ ಸ್ಥಳದಿಂದ ವಿಡಿಯೋ ಮೂಲಕ ಇಂಚಿಂಚು ವಿಚಾರವನ್ನ ಹಂಚಿಕೊಂಡಿದ್ದಾರೆ.

 

ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೀನಿ, ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟರು ಹಲ್ಲೆ ಮಾಡಿದರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು ಎಂದು ಕಾರ್ತಿಕ್‌ ಅವರು ಹೇಳಿದ್ದಾರೆ.

 

ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್‌ರೇವಣ್ಣ ಸ್ಟೇ ತರುತ್ತಾರೆ. ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

 

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತು ನಾನು ವಿಡಿಯೋ ಕೊಟ್ಟಿಲ್ಲ, ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೂ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ, ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದೆ. ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿ ಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲಾ ವಿವರವಾಗಿ ಹೇಳುತ್ತೇನೆ.

ಕಾಂಗ್ರೆಸ್‌ನವರ ಹೆಸರನ್ನು ಬೆರೆಸಬೇಡಿ. ದೇವೇಗೌಡರನ್ನು ಬಿಟ್ಟರೆ ಯಾರಿಗೂ ಒಂದು ತುಣುಕು ಕೊಟ್ಟಿಲ್ಲ, ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಕೂಲಂಕಷವಾಗಿ ಹೇಳುತ್ತೇನೆ. ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ನಾನು ನೋಡಿದ್ದೇನೆ, ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆ ಧೈರ್ಯವಾಗಿ ಮುಂದೆ ಬನ್ನಿ ಎಂದು ಹೇಳಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು