24 ಗಂಟೆಯೊಳಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್: ಅಪ್ಪ-ಮಗನಿಗೆ ಭಾರೀ ಸಂಕಷ್ಟ
ಬೆಂಗಳೂರು, ಏಪ್ರಿಲ್ 30: ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ತಂದೆ ಎಚ್‌ಡಿ ರೇವಣ್ಣ ಅವರಿಗೆ ಎಸ್‌ಐಟಿ ಭಾರೀ ಆಘಾತ ನೀಡಿದೆ. ಮಂಗಳವಾರ ನೋಟಿಸ್ ಜಾರಿ ಹಾಜರಾಗುವಂತೆ ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಪೆನ್‌ಡ್ರೈವ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ (SIT)ಕ್ಕೆ ನೀಡುತ್ತಿದ್ದ ತನಿಖೆ ಆರಂಭಿಸಿರುವ ಅಧಿಕಾರಿಗಳು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮತ್ತವರ ತಂದೆ ಎಚ್‌ಡಿ ರೇವಣ್ಣ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಮುಂದಿನ 24 ಗಂಟೆಯೊಳಗೆ ಖುದ್ದು ಅಪ್ಪಾ-ಮಗಾ ಖುದ್ದು ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.