ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?
ಬೆಂಗಳೂರು, ಮೇ 01: ಬರಗಾಲದಂಥ ಸಂಕಷ್ಟದ ಸಂದರ್ಭದಲ್ಲಿ ಹೈನುಗಾರಿಕೆ ರೈತರಿಗೆ ಆದಾಯದ ಮೂಲವಾಗಿತ್ತು. ಆದರೆ ಕಳೆದ ಏಳು ತಿಂಗಳಿಂದ ಸರಕಾರ ಪ್ರೋತ್ಸಾಹ ಧನವನ್ನೇ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು, ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.