ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಎಸ್‌ಐಟಿ ವಶಕ್ಕೆ
ಬೆಂಗಳೂರು, ಮೇ. 04: ದೇಶದ ಗಮನವನ್ನೇ ತನ್ನತ್ತ ಸೆಳೆದಿರುವ ಹಾಸನದ ಲಯಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೊನೆಗೂ ಚೇತರಿಕೆ ಕಂಡು ಬಂದಿದೆ. ತಮ್ಮ ಮಗ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಜೊತೆಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.
ಲಯಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜನಪ್ರತಿನಿಧಿ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಜಾಮೀನು ಸಿಗದ ಬೆನ್ನಲ್ಲೇ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ಬೆಂಗಳೂರಿನಲ್ಲಿರುವ ಮಾಜಿ ಪ್ರಧಾನಿ ಮತ್ತು ಅವರ ತಂದೆ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.