ಎಚ್.ಡಿ.ರೇವಣ್ಣ ಆಸ್ಪತ್ರೆಗೆ ದಾಖಲು
ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿರುವ ಆರೋಪ ಹಿನ್ನೆಲೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಕೋರ್ಟ್‌ಗೆ ಹಾಜರುಪಡಿಸಿ ಮೇ 8ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.